ಪರ್ತ್: ಟಿ 20 ವಿಶ್ವಕಪ್ ಪಂದ್ಯದಲ್ಲಿ ಭಾನುವಾರ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಸಂಜೆ 4.30ರಿಂದ ಸೂಪರ್ 12ರ ಎರಡನೇ ಗುಂಪಿನ ಪಂದ್ಯ ನಡೆಯಲಿದೆ. ಪಾಕಿಸ್ತಾನ ಮತ್ತು ನೆದರ್ಲೆಂಡ್ ವಿರುದ್ಧ ಗೆದ್ದಿರುವ ಭಾರತ 4 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ
ಸ್ಥಾನದಲ್ಲಿದೆ. 3 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ.
ಆರಂಭಿಕ ಬ್ಯಾಟರ್ ಕೆ.ಎಲ್. ರಾಹುಲ್ ಅವರನ್ನು ಬಿಟ್ಟರೆ ಭಾರತದ ಉಳಿದ ಬ್ಯಾಟರ್‌ಗಳಾದ ವಿರಾಟ್, ಸೂರ್ಯಕುಮಾರ್ ಹಾಗೂ ರೋಹಿತ್ ಉತ್ತಮ ಫಾರ್ಮ್‌ನಲ್ಲಿದ್ದಾರೆ.
ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಕೂಡ ಉತ್ತಮ ಲಯದಲ್ಲಿಲ್ಲ.ಬಾಂಗ್ಲಾ ಎದುರಿನ ಪಂದ್ಯದಲ್ಲಿ ಶತಕ ಗಳಿಸಿರುವ ರಿಲೀ ರೊಸೊ ಮಧ್ಯಮಕ್ರಮಾಂಕದ ಶಕ್ತಿಯಾಗಿದ್ದಾರೆ. ಡೇವಿಡ್ ಮಿಲ್ಲರ್, ಮರ್ಕರಂ ಹಾಗೂ ಕ್ವಿಂಟನ್ ಡಿಕಾಕ್ ಸ್ಪೋಟಕ ಬ್ಯಾಟಿಂಗ್ ಮಾಡುವ ಸಮರ್ಥರು.
ತಂಡಗಳು:
ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಆರ್ಷದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಆರ್. ಅಶ್ವಿನ್, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಅಕ್ಷರ್ ಪಟೇಲ್, ದೀಪಕ್ ಹೂಡಾ, ಯಜುವೇಂದ್ರ ಚಾಹಲ್.
ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿಕಾಕ್, ರೀಜಾ ಹೆನ್ರಿಕ್ಸ್, ಹೆನ್ರಿಚ್ ಕ್ಲಾಸನ್, ಕೇಶವ್ ಮಹಾರಾಜ, ಏಡನ್ ಮರ್ಕರಂ, ಡೇವಿಡ್ ಮಿಲ್ಲರ್, ಲುಂಗಿ ಗಿಡಿ, ಎನ್ರಿಚ್ ನಾಕಿಯಾ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ರಿಲೀ ರೋಸೊ, ತಬ್ರೇಜ್ ಶಮ್ಸಿ, ಟ್ರಿಸ್ಟನ್ ಸ್ಟಬ್ಸ್.
ಪಂದ್ಯ ಆರಂಭ: ಸಂಜೆ 4.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಆ್ಯಪ್