ಡರ್ಬನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಡರ್ಬನ್ನಲ್ಲಿರುವ ಕಿಂಗ್ಸ್ಮೀಡ್ ಕ್ರಿಕೆಟ್ ಮೈದಾನದಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯವನ್ನು ರದ್ದು ಮಾಡಲಾಗಿದೆ.ಮಳೆ ಎಡೆಬಿಡದೆ ನಿರಂತರವಾಗಿ ಸುರಿದ ಪರಿಣಾಮ ಸರಣಿಯ ಮೊದಲ ಪಂದ್ಯವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಮೂರು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯವು
ಮಳೆಯಿಂದಾಗಿ ರದ್ದುಗೊಂಡಿದೆ. ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದು, ದಕ್ಷಿಣ ಆಫ್ರಿಕಾದ ನಾಯಕತ್ವವನ್ನು ಏಡೆನ್ ಮಾರ್ಕ್ರಾಮ್ ವಹಿಸಿಕೊಂಡಿದ್ದಾರೆ. ಎರಡನೇ ಟಿ20 ಪಂದ್ಯ ಡಿಸೆಂಬರ್ 12ರಂದು ಗ್ಕೆಬರ್ಹಾದಲ್ಲಿ ನಡೆಯಲಿದೆ. ಇತ್ತೀಚಿಗೆ ಏಕದಿನ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ನಡೆದ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ 4-1 ಅಂತರದಿಂದ ಸರಣಿ ವಶಪಡಿಸಿಕೊಂಡಿತ್ತು. ಹರಿಣಗಳ ವಿರುದ್ದ ಕಣಕ್ಕಿಳಿದಿರುವ ಯುವ ತಂಡವು ಆತ್ಮವಿಶ್ವಾಸದಲ್ಲಿದೆ.









