ಪರ್ತ್: ಶನಿವಾರದಿಂದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಲಿದೆ.
ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ಎದುರು ಸೆಣಸಲಿದೆ. ಇದೇ ದಿನ
ಪರ್ತ್ನಲ್ಲಿ ನಡೆಯುವ ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಅಫ್ಗಾನಿಸ್ತಾನ ಮುಖಾಮುಖಿಯಾಗಲಿವೆ. ಅ.16ರಿಂದ ಆರಂಭವಾಗಿದ್ದ ಅರ್ಹತಾ ಸುತ್ತಿನಲ್ಲಿ ಪ್ರಮುಖ ತಂಡವಾದ ವೆಸ್ಟ್ ಇಂಡೀಸ್ ಹೊರ ಬಿದ್ದಿದೆ. ಶ್ರೀಲಂಕಾ,ಜಿಂಬಾಬ್ವೆ ಸೇರಿ 4 ತಂಡಗಳು ಸೂಪರ್ 12 ಸುತ್ತಿಗೆ ಪ್ರವೇಶಿಸಿದೆ. ಒಟ್ಟು ಏಳು ನಗರಗಳಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿವೆ. ಭಾರತ ತಂಡವು ಭಾನುವಾರ ನಡೆಯಲಿರುವ ಪಾಕಿಸ್ತಾನ ಎದುರಿನ ಪಂದ್ಯದೊಂದಿಗೆ ತನ್ನ ಅಭಿಯಾನ ಆರಂಭಿಸಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ಥಾನ ಮಧ್ಯೆಯ ಹೈ ವೋಲ್ಟೇಜ್ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಮಳೆ ಭೀತಿ ಎದುರಾಗಿದೆ.