ತಿರುವನಂತಪುರಂ: ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿದೆ.ಆರಂಭದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಕೊನೆಯಲ್ಲಿ ರಿಂಕು ಸಿಂಗ್ ಸಿಡಿಲಬ್ವರದ ಬ್ಯಾಟಿಂಗ್ ಭಾರತಕ್ಕೆ ಬೃಹತ್ ಮೊತ್ತ ಪೇರಿಸಲು ನೆರವಾಯಿತು.ಯಶಸ್ವಿ ಜೈಸ್ವಾಲ್ ಮತ್ತು
ಋತುರಾಜ್ ಗಾಯಕ್ವಾಡ್ ಜೋಡಿ ಭಾರತಕ್ಕೆ ಉತ್ತಮ ಆರಂಭ ನೀಡಿದರು.ಸ್ಫೋಟಕ ಬ್ಯಾಟಿಂಗ್ ನಡೆಸಿದಯಶಸ್ವಿ ಜೈಸ್ವಾಲ್ 25 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರೆ, ರಿಂಕು ಸಿಂಗ್ ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 31 ರನ್ ಚಚ್ಚಿದರು. ಋತುರಾಜ್ ಗಾಯಕ್ವಾಡ್, ಇಸಾನ್ ಕಿಶನ್ ಅರ್ಧ ಶತಕ ಸಿಡಿಸಿದರು. ಗಾಯಕ್ವಾಡ್ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 58 ರನ್ ಬಾರಿಸಿದರೆ, ಇಸಾನ್ ಕಿಶನ್ 32 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ನೆರವಿನಿಂದ 52 ರನ್ ಬಾರಿಸಿದರು.ನಾಯಕ ಸೂರ್ಯಕುಮಾರ್ ಯಾದವ್ 10 ಎಸೆತದಲ್ಲಿ 2 ಸಿಕ್ಸರ್ ಸಹೀತ 19 ರನ್ ಗಳಿಸಿದರು. ತಿಲಕ್ ವರ್ಮಾ 2 ಎಸೆತಗಳಲ್ಲಿ 1 ಸಿಕ್ಸರ್ ಸಹೀತ ಅಜೇಯ 7 ರನ್ ಬಾರಿಸಿದರು. ಆಸ್ಟ್ರೇಲಿಯಾ ಪರ ನಾಥನ್ ಎಲ್ಲೀಸ್ 3 ವಿಕೆಟ್ ಪಡೆದರು.







