ನವದೆಹಲಿ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಎರಡನೇ ಜಯ ದಾಖಲಿಸಿದೆ. ಇಂದು ನಡೆದ ಪಂದ್ಯದಲ್ಲಿ ನಮಿಬಿಯಾ ತಂಡವನ್ನು 93 ರನ್ಗಳಿಂದ ಪರಾಭವಗೊಳಿಸಿದೆ. ಮೊದಲು ಬ್ಯಾಟ್ ಮಾಡಿದ
ಭಾರತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು
209 ರನ್ ಗಳಿಸಿತು. ಗುರಿ ಬೆನ್ನಟ್ಟಿದ ನಮಿಬಿಯಾ 18.2 ಓವರ್ಗಳಲ್ಲಿ 116 ರನ್ಗೆ ಆಲ್ ಔಟ್ ಆಯಿತು. ಭಾರತದ ಪರ ವರುಣ್ ಚಕ್ರವರ್ತಿ 3, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರೆ, ಜಸ್ಪ್ರೀತ್ ಬೂಮ್ರಾ, ಹರ್ಷದೀಪ್ ಸಿಂಗ್, ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು. ಮೊದಲು ಬ್ಯಾಟ್ ಮಾಡಿದ
ಭಾರತ ಪರ ಇಶಾನ್ ಕಿಸನ್ ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಅರ್ಧ ಶತಕ ದಾಖಲಿಸಿದರು. ಕಿಶನ್ 24 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 61 ರನ್ ಬಾರಿಸಿದರೆ. ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ ತಲಾ 4 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು. ನಮಿಬಿಯಾ ನಾಯಕ ಎರಸ್ಮಸ್ 4 ವಿಕೆಟ್ ಪಡೆದರು..







