ಕೇಪ್ಟೌನ್: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.ತನ್ನ ಮೊದಲ ಪಂದ್ಯದಲ್ಲಿ ಭಾನುವಾರ ಪಾಕಿಸ್ತಾನ ವಿರುದ್ಧ 7 ವಿಕೆಟ್ ಗೆಲುವು ಮೂಲಕ ಭರ್ಜರಿ ಆರಂಭ ಪಡೆಯಿತು.ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಭಾರತ

19 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಭಾರತದ ಪರ ಜೆಮಿಮಾ ರೋಡ್ರಿಗಸ್ 38 ಎಸೆತಗಳಿಂದ 8 ಬೌಂಡರಿ ನೆರವಿನಿಂದ ಅಜೇಯ 53 ರನ್ ಹಾಗು ರಿಚಾ ಗೋಶ್ 20 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ ಅಜೇಯ 31 ರನ್ ಗಳಿಸಿದರು. ಇವರಿಬ್ಬರು ಮುರಿಯದ 4ನೇ ವಿಕೆಟ್ಗೆ 33 ಎಸೆತಗಳಲ್ಲಿ 58 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರಂಭಿಕರಾದ ಶಫಾಲಿ ವರ್ಮ 25 ಎಸೆತಗಳಲ್ಲಿ 33 ರನ್, ಯಾಶಿಕಾ ಭಾಟಿಯಾ 17 ರನ್ ಹಾಗು ನಾಯಕಿ ಹರ್ಮನ್ ಪ್ರೀತ್ ಕೌರ್ 16 ರನ್ ಗಳಿಸಿದರು. ಇದಕ್ಕೂ ಮುನ್ನ ಪಾಕ್ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಬಿಸ್ಮಾ ಮಾರೂಫ್ ಔಟಾಗದೆ 68, ಆಯೇಷಾ ನಸೀಮ್ ಔಟಾಗದೆ 43 ರನ್ ಗಳಿಸಿ ತಂಡಕ್ಕೆ ಆಸರೆಯಾದರು.ಭಾರತದ ಪರ ರಾಧಾ ಯಾದವ್ 2, ದೀಪ್ತಿ ಶರ್ಮಾ ಹಾಗೂ ಪೂಜಾ ತಲಾ ಒಂದೊಂದು ವಿಕೆಟ್ ಪಡೆದರು.