ಅಹಮದಾಬಾದ್: ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್ಗಳ ಅಂತರದಲ್ಲಿ ಸೋಲಿಸುವ ಮೂಲಕ ಮೂರನೇ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ದಾಖಲೆ ಬರೆದಿದೆ. ಭಾರತ ತಂಡವು ಸತತವಾಗಿ ಎರಡು ಟಿ20 ವಿಶ್ವಕಪ್ ಟ್ರೋಫಿ ಗೆದ್ದ ವಿಶ್ವದ ಮೊದಲ ತಂಡ ಎಂಬ ಸಾಧನೆ ಮಾಡಿದೆ. ಇದಕ್ಕೂ ಮೊದಲು
ಅಂದರೆ 2024ರಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿತ್ತು.
ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ತಲಾ ಎರಡೆರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿವೆ.ಆದರೆ, ಭಾರತ ತಂಡವು ಸತತ ಎರಡು ಬಾರಿ ಫೈನಲ್ ಟ್ರೋಫಿ ಸೇರಿದಂತೆ ಒಟ್ಟು ಮೂರು ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಟೀಂ ಇಂಡಿಯಾ ಪಾತ್ರವಾಯಿತು.












