ಕೇಪ್ಟೌನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ 5 ರನ್ ಅಂತರದ ಗೆಲುವು ಸಾಧಿಸಿದೆ.ಇಲ್ಲಿನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ, ಬೆತ್ ಮೂನಿ ಗಳಿಸಿದ ಅರ್ಧಶತಕ
ಹಾಗೂ ನಾಯಕಿ ಮೆಗ್ ಲ್ಯಾನಿಂಗ್ ಬಿರುಸಿನ ಬ್ಯಾಟಿಂಗ್ ಬಲದಿಂದ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ಗಳನ್ನು ಕಳೆದುಕೊಂಡು 172 ರನ್ ಗಳಿಸಿತು.ಈ ಗುರಿ ಬೆನ್ನತ್ತಿದ ಭಾರತ 20 ಓವರ್ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 167 ರನ್ ಗಳಿಸಲಷ್ಟೇ ಶಕ್ತವಾಯಿತು.
ಅಗ್ರ ಕ್ರಮಾಂಕದ ಬ್ಯಾಟರ್ಗಳು ವೈಫಲ್ಯ ಅನುಭವಿಸಿದ್ದು, ಭಾರತಕ್ಕೆ ಹಿನ್ನಡೆಯಾಯಿತು. ಆರಂಭಿಕ ಬ್ಯಾಟರ್ಗಳಾದ ಸ್ಮೃತಿ ಮಂದಾನ (2), ಶೆಫಾಲಿ ವರ್ಮಾ (9) ಮತ್ತು ಯಸ್ತಿಕಾ ಭಾಟಿಯಾ (4) ಎರಡಂಕಿ ಮೊತ್ತ ಗಳಿಸಲು ವಿಫಲರಾದರು. ನಾಯಕಿ ಹರ್ಮನ್ಪ್ರೀತ್ ಕೌರ್ (34 ಎಸೆತಗಳಲ್ಲಿ 54) ಹಾಗೂ ಜೆಮಿಮಾ ರಾಡ್ರಿಗಸ್ (24 ಎಸೆತಗಳಲ್ಲಿ 43) ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೊನೆಯಲ್ಲಿ ದೀಪ್ತಿ ಶರ್ಮಾ (20) ಹೋರಾಟ ನಡೆಸಿದರೂ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.ಇದರೊಂದಿಗೆ ಭಾರತ ತಂಡದ ಪ್ರಶಸ್ತಿ ಕನಸು ಭಗ್ನಗೊಂಡಿತು.