ಸಿಡ್ನಿ: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ‘ಸೂಪರ್ 12’ ಹಂತದ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಭಾರತ ತಂಡ 56 ರನ್ ಅಂತರದ ಜಯ ಸಾಧಿಸಿತು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ನೆದರ್ಲೆಂಡ್ಸ್

ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗೆ 123ರನ್ ಗಳಿಸಿ ಸೋಲೊಪ್ಪಿಕೊಂಡಿತು.ಭಾರತದ ಪರ ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಹಾಗು ಸೂರ್ಯಕುಮಾರ್ ಯಾದವ್ ಅರ್ಧ ಶತಕ ಸಿಡಿಸಿದರು.ರೋಹಿತ್ 39 ಎಸೆತಗಳಲ್ಲಿ 53 ರನ್ ಕಲೆಹಾಕಿದರೆ, ವಿರಾಟ್ 44 ಎಸೆತಗಳಲ್ಲಿ ಅಜೇಯ 62 ರನ್ ಬಾರಿಸಿದರು. ಬಿರುಸಿನ ಬ್ಯಾಟಿಂಗ್ ನಡೆಸಿದ ಸೂರ್ಯ ಕೇವಲ 25 ಎಸೆತಗಳಲ್ಲೇ 51 ಗಳಿಸಿ ಔಟಾಗದೆ ಉಳಿದರು.ಭಾರತ ಪರ ಉತ್ತಮ ಬೌಲಿಂಗ್ ನಡೆಸಿದ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ರವಿಚಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು. ಇನ್ನೊಂದು ವಿಕೆಟ್ ಮೊಹಮ್ಮದ್ ಶಮಿ ಪಾಲಾಯಿತು.ಈ ಜಯದೊಂದಿಗೆ ‘ಸೂಪರ್ 12’ ಹಂತದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ಭಾರತ, ‘ಬಿ ಗುಂಪಿನಲ್ಲಿ’ ಮೊದಲ ಸ್ಥಾನಕ್ಕೇರಿತು. ಭಾರತ ಅಕ್ಟೋಬರ್ 30ರಂದು ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಮುಂದಿನ ಪಂದ್ಯ ಆಡಲಿದೆ.