ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆದ 51 ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ
ಟ್ಯಾಬ್ಲೋ ಸಮಿತಿಗಳಿಗೆ ಸ್ಮರಣಿಕೆ ನೀಡಿ ಗೌರವಹಿಸಲಾಯಿತು.
ವೀರಕೇಸರಿ ವಿಷ್ಣು ಸರ್ಕಲ್, ಗಜ ಕೇಸರಿ, ಡಿಜೆ ಫ್ರೆಂಡ್ಸ್, ಗೆಳೆಯರ ಬಳಗ ಹಳೆಗೇಟು, ಕಾರ್ಗಿಲ್ ಬಾಯ್ಸ್, ಜನನಿ ಫ್ರೆಂಡ್ಸ್ ಆಲೆಟ್ಟಿ ಮತ್ತಿತರ ಸಮಿತಿಯ ಪದಾಧಿಕಾರಿಗಳು ಆಗಮಿಸಿ ಗೌರವ ಸ್ಮರಣಿಕೆ ಸ್ವೀಕರಿಸಿದರು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್,ಅಧ್ಯಕ್ಷ ಚಿದಾನಂದ ವಿದ್ಯಾನಗರ, ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ನಾರಾಯಣ ಕೇಕಡ್ಕ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪ್ರದೀಪ್ ಕೆ.ಎನ್. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಹಾಗು ಮೂರು ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.