ಸುಳ್ಯ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಯಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಅವರು ಹೊಲಿಗೆ ಯಂತ್ರಗಳನ್ನು
ವಿತರಿಸಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಮುಖಂಡರಾದ ಹರೀಶ್ ಕಂಜಿಪಿಲಿ, ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ವಿನಯಕುಮಾರ್ ಮುಳುಗಾಡು, ಸುನಿಲ್ ಕೇರ್ಪಳ, ಪ್ರಸಾದ್ ಕಾಟೂರು, ಶಿವಪ್ರಸಾದ್ ನಡುತೋಟ, ಇಂದಿರಾ ಬಿ.ಕೆ, ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಡಿ.ಮಂಜು ಮತ್ತಿತರರು ಉಪಸ್ಥಿತರಿದ್ದರು. 34 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲಾಯಿತು.