ತಲಪಾಡಿ:ಮಂಜೇಶ್ವರ ತಲಪಾಡಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ತಲಪಾಡಿ ಟೋಲ್ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ
ಕರ್ನಾಟಕ ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದತ್ತ ಚಲಿಸಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ರಿಕ್ಷಾದಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಕೆಲವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.












