ಸುಳ್ಯ:ಸುಳ್ಯ ತಾಲೂಕು ಪಂಚಾಯತ್, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಪ್ರೆಸ್ ಕ್ಲಬ್ ಸುಳ್ಯ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಪಯಸ್ವಿನಿ ಯುವಕ ಮಂಡಲ ಕೇರ್ಪಳ ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ತಾಲೂಕು
ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ತಾಲೂಕು ಪಂಚಾಯತ್ ಇ.ಒ. ರಾಜಣ್ಣ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ “ಪ್ರತೀ ದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ” ಎಂದರು.
ಸುಳ್ಯ ಪತಂಜಲಿ ಯೋಗ ತರಬೇತಿ ಸಂಸ್ಥೆಯ ಯೋಗ ಶಿಕ್ಷಕಿ ಸುನಂದ ಶೆಟ್ಟಿ ಮತ್ತು ತಂಡದವರು

ಯೋಗ ತರಬೇತಿ ನೀಡಿದರು.
ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಕಾರ್ಯದರ್ಶಿ ಮುರಳಿ ನಳಿಯಾರು, ಮಾಜಿ ಅಧ್ಯಕ್ಷ ದಯಾನಂದ ಕೇರ್ಪಳ, ನಿರ್ದೇಶಕ ಶಿವಪ್ರಸಾದ್ ಕೇರ್ಪಳ, ಎ.ಪಿ.ಎಂ.ಸಿ.ಸಹಾಯಕ ಕಾರ್ಯದರ್ಶಿ ಮುದ್ದು ಕೃಷ್ಣ, ಪಯಸ್ವಿನಿ ಯುವಕ ಮಂಡಲದ ಅಧ್ಯಕ್ಷ ವಿನ್ಯಾಸ್ ಕುರುಂಜಿ, ಕಾರ್ಯದರ್ಶಿ ಅಜಿತ್ ಕೆ.ಆರ್. ಮುಖ್ಯ ಅತಿಥಿಗಳಾಗಿದ್ದರು.ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ವಂದಿಸಿದರು. ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.







