ಕರೂರು (ತಮಿಳುನಾಡು):‘ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ಕರೂರು ಜಿಲ್ಲೆಯಲ್ಲಿ ಶನಿವಾರ ನಡೆಸಿದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾದ ಕಾರಣ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿದೆ.50ಕ್ಕೂ ಹೆಚ್ಚು ಮಂದಿಯನ್ನು ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.ವಿಜಯ್ ಅವರು ತಮ್ಮ ಪಕ್ಷದ
ಪರ ರಾಜ್ಯದಾದ್ಯಂತ ಪ್ರಚಾರ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಹಮ್ಮಿಕೊಂಡ ಸಭೆ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾವಣೆ ಗೊಂಡರು. ನಟನನ್ನು ನೋಡಲು ಪಕ್ಷದ ಕಾರ್ಯಕರ್ತರು ಹಾಗೂ ಸಾವಿರಾರು ಅಭಿಮಾನಿಗಳು ಸೇರಿದ್ದರು.ಮೃತರಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೂ ಸೇರಿದ್ದರು ಎನ್ನಲಾಗಿದೆ. ವಿಜಯ್ ಅವರನ್ನು ಹತ್ತಿರದಿಂದ ನೋಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ಎರು. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಯಿತು.
ಗಾಯಗೊಂಡವರನ್ನು,ಪ್ರಜ್ಞೆ ತಪ್ಪಿದವರನ್ನು ಕರೂರು ವೈದ್ಯಕೀಯ ಆಸ್ಪತ್ರೆ ಹಾಗೂ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಮೃತರ ಹಾಗೂ ಪ್ರಜ್ಞೆತಪ್ಪಿದವರ ಕುಟುಂಬಸ್ಥರು ಅಳು ಮುಗಿಲು ಮುಟ್ಟಿತ್ತು. ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದ ದೃಶ್ಯಗಳು ಮನ ಕಲಕುವಂತಿದ್ದವು.





