ಅರಂತೋಡು: ಟೈಲ್ಸ್ ತುಂಬಿಕೊಂಡು ಸಂಚರಿಸುತ್ತಿದ್ದ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ಅರಂತೋಡಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಟೈಲ್ಸ್ ತುಂಬಿಕೊಂಡು ತೆರಳುತ್ತಿದ್ದ

ಕಂಟೈನರ್ ಲಾರಿ ಅರಂತೋಡು ಪೇಟೆಯಿಂದ ಮುಂದೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರ ಠಾಣಾ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.









