ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಕಾರು ಸಮೀಪ ಬೈತ್ತಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಲಾರಿಯೋಂದು ರಸ್ತೆ ಮಧ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಸುಳ್ಯ ಕೆಎಸ್ಆರ್ಟಿಸಿ ಡಿಪ್ಪೋಗೆ
ಡೀಸಲ್ ಕೊಂಡೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ಅಪಘಾತಕ್ಕೀಡಾಯಿತು. ಡೀಸಲ್ ಸೋರಿಕೆಯಾಗುತ್ತಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತದಲ್ಲಿ ಚಾಲಕನಿಗೆ ಗಾಯವಾಗಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ.