ಮುಪ್ಪೇರ್ಯ: ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದ ಕಾಪಡ್ಕ ಎಂಬಲ್ಲಿ ಸುಮಾರು 15 ದಿನಗಳಿಂದ ವಿದ್ಯುತ್ ಟಿಸಿ ಕೆಟ್ಟು ಹೋಗಿ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಪ್ರವೀಣ ಪಿ.ರೈ ಮರುವಂಜ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಪ್ಪ ಅವರ ಗಮನಕ್ಕೆ ತಂದರು. ಕೂಡಲೇ ಅವರು ಮೆಸ್ಕಾಂ ಇಂಜಿನಿಯರ್ ಹಾಗೂ ಅಧಿಕಾರಿಗಳ ಗಮನಕ್ಕೆ ತಂದುರು. ಮೆಸ್ಕಾಂ ಇಂಜಿನಿಯರ್ ಹಾಗೂ ಜೆಇ ಅವರು ಆಗಮಿಸಿ ಪರಿಶೀಲನೆ ನಡೆಸಿ 24 ಗಂಟೆಯಲ್ಲಿ ಹೊಸ ಟಿಸಿ ಅಳವಡಿಸಿ ಸಮಸ್ಯೆ ಪರಿಹರಿಸಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.