ಸುಳ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಸುಳ್ಯ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಜನ್ಮದಿನೋತ್ಸವ ಶಿಕ್ಷಕರ ದಿನಾಚರಣೆ 2023 ಕಾರ್ಯಕ್ರಮ ಸೆ.5 ರಂದು ಬೆಳಗ್ಗೆ ಗಂಟೆ 10ರಿಂದ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ ಎಂದು
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಹೇಳಿದರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಘನ ಉಪಸ್ಥಿತಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗೌರವ ಉಪಸ್ಥಿತಿ ಇರುವರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ.ಭರತ್ ವೈ ಶೆಟ್ಟಿ, ರಾಜೇಶ್ ನಾಯ್ಕ್ ಯು., ಡಿ.ವೇದವ್ಯಾಸ ಕಾಮತ್, ಹರೀಶ್ ಪೂಂಜ, ಉಮಾನಾಥ್ ಕೋಟ್ಯಾನ್, ಅಶೋಕ್ ಕುಮಾರ್ ರೈ, ರಾಜ್ಯಸಭಾ ಸಂಸದ ಡಾ.ಡಿ.ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಕೆ.ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್ ಕೆ., ಬಿ.ಎಂ.ಫಾರೂಕ್, ಎಸ್.ಎಲ್.ಭೋಜೇಗೌಡ, ಮಂಜುನಾಥ ಭಂಡಾರಿ ಮುಖ್ಯ ಅತಿಥಿಗಳಾಗಿ, ಸುಳ್ಯ ಎಒಎಲ್ಎ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸುಳ್ಯ ಕೆವಿಜಿ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಕೆ.ವಿ.ರೇಣುಕಾ ಪ್ರಸಾದ್ ವಿಶೇಷ ಆಹ್ವಾನಿರತಾಗಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಎಸ್ಪಿ ರಿಷ್ಯಂತ್ ಸಿ.ಬಿ., ಜಿ.ಪಂ. ಸಿಇಒ ಡಾ.ಆನಂದ್ ಕೆ., ಎಸಿ ಗಿರೀಶ್ ನಂದನ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮಂಗಳೂರು ಶಿಕ್ಷಕ ಶಿಕ್ಷಣ ಮಗಾವಿದ್ಯಾಲಯದ ಪ್ರಾಂಶುಪಾಲ ಹಾಗೂ ಪದನಿಮಿತ್ತ ಸಹನಿರ್ದೇಶಕರಾದ ಡಾ. ಸಿಪ್ರಿಯನ್ ಮೊಂತೆರೋ ಗೌರವ ಆಹ್ವಾನಿತರಾಗಿ ಭಾಗವಹಿಸುವರು. ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ವಿಶ್ವನಾಥ ಬದಿಕಾನ ಪ್ರಧಾನ ಭಾಷಣ ಮಾಡುವರು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಕೇತರ ನೌಕರರಿಗೆ ಸನ್ಮಾನ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸೀತಾರಾಮ ಹೊಸೋಳಿಕೆ, ಶಿಕ್ಷಣ ಸಂಯೋಜಕಿ ನಳಿನಿ ಉಪಸ್ಥಿತರಿದ್ದರು