ಸುಳ್ಯ:ಜೀವನದ ಎಲ್ಲಾ ಸಂದರ್ಭದಲ್ಲಿ ನಾವು ನಮ್ಮ ಬದುಕಿಗೆ ದಾರಿ ತೋರಿದ ಗುರುಗಳನ್ನು ಸ್ಮರಿಸಿಕೊಳ್ಳಬೇಕು. ಮಹಾನ್ ವ್ಯಕ್ತಿಗಳ ಆದರ್ಶ ಬದುಕನ್ನು ಮೈಗೂಡಿಸಿಕೊಂಡು ಬದುಕಿನಲ್ಲಿ ಆತ್ಮ ವಿಶ್ವಾಸ, ಉತ್ತಮ ಜೀವನ ಮೌಲ್ಯ, ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು
ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಹೇಳಿದರು.ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕರಿಗಾಗಿ ವಿವಿಧ ಸ್ಪರ್ಧೆಯನ್ನು ಆಯೋಜಿಸಿದ್ದರು. ವಿದ್ಯಾರ್ಥಿನಿಯರಾದ ಅಂಬಿಕಾ ಮತ್ತು ಬಳಗದವರು ಪ್ರಾರ್ಥಿಸಿ,ಆಜ್ಞ ಐಪಲ್ ಸ್ವಾಗತಿಸಿದರು ,ಅಭಿಷೇಕ್ ಮತ್ತು ಬಳಗದವರು ಸಮೂಹ ಗೀತೆ ಸಾದರಪಡಿಸಿದರು.ಅನ್ವಿತಾ ಆರ್ ಭಟ್ ವಂದಿಸಿದರು. ಅನನ್ಯ ಎ ನಿರೂಪಿಸಿದರು. ಬೋಧಕ -ಬೋಧಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿರಿದ್ದರು.