ಸುಳ್ಯ:ಶಾಲಾ ಶಿಕ್ಷಣ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿಯವರ ಕಚೇರಿ ಸುಳ್ಯ, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸುಳ್ಯ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನೋತ್ಸವ ಶಿಕ್ಷಕರ ದಿನಾಚರಣೆ ದಿನಾಚರಣೆ ಸುಳ್ಯದ
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ನಿವೃತ್ತ ಪ್ರಾಂಶುಪಾಲ ಡಾ.ಎಚ್.ಮಾಧವ ಭಟ್ ದಿಕ್ಸೂಚಿ ಭಾಷಣ ಮಾಡಿದರು.ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಹಶೀಲ್ದಾರ್ ಮಂಜುಳ ಎಂ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಸುಳ್ಯ
ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ, ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲ ಮೋಹನ್ ಗೌಡ.ಬಿ, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್.ಯು.ಕೆ, ಪಿ.ಎಂ.ಪೋಷಣ್ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಜಯ, ಕೆಪಿಎಸ್ ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್, ಉಪಪ್ರಂಶುಪಾಲ ಪ್ರಕಾಶ್ ಮೂಡಿತ್ತಾಯ, ಶಿಕ್ಷಣ ಸಂಯೋಜಕ ಉದಯಕುಮಾರ್ ರೈ, ಶಿಕ್ಷಕ, ಶಿಕ್ಷಕೇತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ, ದೇವರಾಜ್ ಎಸ್.ಕೆ,ಸುನಿಲ್ ಕುಮಾರ್,
ಪದ್ಮನಾಭ ಎಡಮಂಗಲ, ಧನಂಜಯ.ಎಂ,
ಮೋಹನ್ ಎಣ್ಮೂರು, ವಿಜೇತ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕರು, ಶಿಕ್ಷಕೇತರ ನೌಕರರು,ಸ್ಕೌಟ್ ಗೈಡ್ ಉತ್ತಮ ಶಿಕ್ಷಕರನ್ನು, ಎಸ್ಎಸ್ಎಲ್ಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, 2025ರಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ಶಿಕ್ಷಕರನ್ನು, ಪುಷ್ಠಿ ಕಾರ್ಯಕ್ರಮದಡಿ ಉತ್ತಮ ಎಸ್ಡಿಎಂಸಿ ಪ್ರಶಸ್ತಿ ಪಡೆದ ಶಾಲೆಗಳನ್ನು ಸನ್ಮಾನಿಸಲಾಯಿತು.










