ಬೆಂಗಳೂರು: ಟೀಮ್ ಇಂಡಿಯಾದ ಎಲ್ಲ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ದೀಪಾವಳಿಯನ್ನು ಆಚರಿಸಿದ್ದಾರೆ. ರೋಹಿತ್ ಪತ್ನಿ ರಿತಿಕಾ, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಸೇರಿ ಎಲ್ಲಾ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.ಬಿಸಿಸಿಐ ಆಟಗಾರರ ದೀಪಾವಳಿ ಆಚರಣೆ ವೀಡಿಯೋವನ್ನು

ಎಕ್ಸ್ನಲ್ಲಿ ಹಂಚಿಕೊಂಡಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಅಂತಿಮ ಕ್ರಿಕೆಟ್ ವಿಶ್ವಕಪ್ ಲೀಗ್ ಪಂದ್ಯಕ್ಕೆ ಮುಂಚಿತವಾಗಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಗಿಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಬುಮ್ರಾ, ಶಮಿ, ಸೂರ್ಯಕುಮಾರ್ ಯಾದವ್, ಕೆ.ಎಲ್.ರಾಹುಲ್ ಸೇರಿದಂತೆ ಆಟಗಾರರು, ಕೋಚ್ ರಾಹುಲ್ ದ್ರಾವಿಡ್ ಸೇರಿ ಭಾರತ ಕ್ರಿಕೆಟ್ ತಂಡ ನವೆಂಬರ್ 11 ರಂದು ದೀಪಾವಳಿಯನ್ನು ಆಚರಿಸಿದೆ. ಟೀಮ್ ಇಂಡಿಯಾದ ಎಲ್ಲ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು. ರೋಹಿತ್ ಅವರು ಪತ್ನಿ ರಿತಿಕಾ ಜೊತೆಗೆ ಕ್ಲಾಸಿ ಕುರ್ತಾದಲ್ಲಿ ಕಾಣಿಸಿಕೊಂಡಿದ್ದಾರೆ. ಕೊಹ್ಲಿ-ಅನುಷ್ಕಾ ಕೂಡ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ಟೀಂ ಇಂಡಿಯಾದ ಇನ್ಸ್ಟಾಗ್ರಾಂನಲ್ಲಿ ಹಾಗೂ ಆಟಗಾರರು ಕೂಡ ಸಾಮಾಜಿಕ ಜಾಲತಾಣದಲ್ಲಿ ದೀಪಾವಳಿ ಆಚರಣೆಯ ವೀಡಿಯೋ, ಚಿತ್ರಗಳನ್ನು ಹಂಚಿಕೊಂಡು ದೀಪಾವಳಿ ಶುಭಾಶಯ ಕೋರಿದ್ದಾರೆ.









