ನವದೆಹಲಿ: ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ
ಹಾರ್ದಿಕ್ ಪಾಂಡ್ಯರನ್ನು ನೇಮಿಸಲಾಗಿದ್ದು, ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ರನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್. ರಾಹುಲ್, ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ಗೆ ಕೊಕ್ ಕೊಡಲಾಗಿದೆ.
ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗೆ ಭಾರತ ತಂಡ ಪ್ರಕಟಗೊಂಡಿದ್ದು, ಟೀಮ್ ಇಂಡಿಯಾ ತನ್ನ ಆಭಿಯಾನವನ್ನು ಜೂನ್ 05ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.
ಟಿ-20 ವಿಶ್ವಕಪ್ಗಾಗಿ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರನ್ನಾಗಿ ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಅವೇಶ್ ಖಾನ್ ಅವರನ್ನು ಆಯ್ಕೆ ಮಾಡಲಾಗಿದೆ.