ಬೆಂಗಳೂರು:ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು ಪಂದ್ಯ ರೋಚಕ ಘಟ್ಟ ತಲುಪಿದೆ. ಪಂದ್ಯದ ಮೊದಲ ದಿನ ಮಳೆಯಿಂದಾಗಿ ಸಂಫೂರ್ಣವಾಗಿ ರದ್ದಾಗಿತ್ತು. ಎರಡನೇ ದಿನದಂದು ಆರಂಭವಾದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯಲ್ಪ ಮೊತ್ತಕ್ಕೆ
ಕುಸಿದಿತ್ತು. ಆದರೆ, ಎರಡನೇ ಇನ್ನಿಂಗ್ಸ್ನಲ್ಲಿ ಮೂವರು ಬ್ಯಾಟ್ಸ್ಮನ್ಗಳು ಅರ್ಧಶತಕದ ಫಲದೊಂದಿಗೆ ಭಾರತ ಕಮ್ಬ್ಯಾಕ್ ಮಾಡಿದೆ.
ಪಂದ್ಯದ ಮೂರನೇ ದಿನದ ಎರಡನೇ ಸೆಷನ್ನಲ್ಲಿ ಕಿವೀಸ್ ತಂಡವನ್ನು 402 ರನ್ಗಳಿಗೆ ಆಲೌಟ್ ಮಾಡಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಪರ
ನಾಯಕ ರೋಹಿತ್ ಶರ್ಮ (52 ರನ್, 63 ಎಸೆತ, 8 ಬೌಂಡರಿ, 1 ಸಿಕ್ಸರ್), ವಿರಾಟ್ ಕೊಹ್ಲಿ (70 ರನ್, 102 ಎಸೆತ, 8 ಬೌಂಡರಿ, 1 ಸಿಕ್ಸರ್), ಸರ್ಫರಾಜ್ ಖಾನ್ (70 ರನ್, 78 ಎಸೆತ, 7 ಬೌಂಡರಿ, 3 ಸಿಕ್ಸರ್) ಅರ್ಧಶತಕಗಳ ಫಲದೊಂದಿಗೆ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದ್ದು, ಇನ್ನಿಂಗ್ಸ್ ಹಿನ್ನಡೆಯನ್ನು 125 ರನ್ಗಳಿಗೆ ತಗ್ಗಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ 46 ರನ್ಗಳಿಗೆ ಆಲೌಟ್ ಆಗಿದ್ದ ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ. ರೋಹಿತ್ ಮತ್ತು ಯಶಸ್ವಿ ನಡುವೆ ಮೊದಲ ವಿಕೆಟ್ಗೆ 72 ರನ್ಗಳ ಜೊತೆಯಾಟವಿತ್ತು. ಯಶಸ್ವಿ 52 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರೆ, ನಾಯಕ ರೋಹಿತ್ ಶರ್ಮಾ 63 ಎಸೆತಗಳಲ್ಲಿ 52 ರನ್ ಗಳಿಸಿ ಔಟಾದರು. ಇದಾದ ನಂತರ ವಿರಾಟ್ ಕೊಹ್ಲಿ ಮತ್ತು ಸರ್ಫರಾಜ್ ನಡುವೆ ಶತಕದ ಜೊತೆಯಾಟ ನಡೆದಿದೆ. ಕೊಹ್ಲಿ 102 ಎಸೆತಗಳಲ್ಲಿ 70 ರನ್ ಬಾರಿಸಿ ದಿನದಾಟದ ಕೊನೆಯಲ್ಲಿ ಕ್ಯಾಚಿತ್ತು ಪೆವಿಲಿಯನ್ಗೆ ಸೇರಿಕೊಂಡರು. ಸರ್ಫರಾಜ್ 78 ಎಸೆತಗಳಲ್ಲಿ 70 ರನ್ ಗಳಿಸಿ ಅಜೇಯರಾಗಿ ಉಳಿದಿದ್ದು, ನಾಲ್ಕನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕೊಹ್ಲಿ
ನ್ಯೂಜಿಲೆಂಡ್ ವಿರುದ್ಧ 70 ರನ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 9,000 ರನ್ಗಳ ಸಾಧನೆ ಮಾಡಿದ್ದಾರೆ.