ಸುಳ್ಯ: ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ಬಿ.ಸಿ.ಎ ಕೋರ್ಸ್ ನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಕಾಲೇಜು ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಾರ್ಯದರ್ಶಿ ಅಕ್ಷಯ ಕೆ.ಸಿ ಚಾಲನೆ ನೀಡಿದರು.ಮುಖ್ಯ ಅತಿಥಿಗಳಾಗಿ ಮಡಿಕೇರಿ ಫೀಲ್ಡ್
ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರೊ. ರವಿಶಂಕರ್ ಎಂ.ಎನ್ ಭಾಗವಹಿಸಿದ್ದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎನ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಎಂ, ಆಡಳಿತ ಮಂಡಳಿಯ ಸಲಹೆಗಾರ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಘಟಕದ ಸಮನ್ವಯಾಧಿಕಾರಿ ಡಾ. ಮಮತ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಹಾಗೂ ಸಂಯೋಜಕಿ ಭವ್ಯ ಮನು ಪೆರುಮುಂಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥೆ ದೀಕ್ಷಾ ವಂದಿಸಿದರು. ಬಳಿಕ ಬಿಸಿಎ ವಿಭಾಗಕ್ಕೆ ನೂತನ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









