ಹೊಸದಿಲ್ಲಿ : ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದಿದ್ದ ತೇಜಸ್ವಿನಿ ಗೌಡ ಅವರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡರು. 2004 ಮತ್ತು 2009 ರ ವರೆಗೆ ಕಾಂಗ್ರೆಸ್ ಸಂಸದೆ ಯಾಗಿದ್ದ ತೇಜಸ್ವಿನಿ 2014 ರಲ್ಲಿ ಬಿಜೆಪಿ ಸೇರಿದ್ದರು. ಎರಡು ದಿನ ಮೊದಲು ವಿಧಾನ ಪರಿಷತ್ ಸ್ಥಾನಕ್ಕೆ ತೇಜಸ್ವಿನಿ ರಾಜಿನಾಮೆ ನೀಡಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.