ಸುಳ್ಯ:ಜಾಲ್ಸೂರು ಗ್ರಾಮದ ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ ನೀಡಿದರು.ಮಂದಿರವು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದು ಅದರ ಮೂಲಕ ಗ್ರಾಮದಲ್ಲಿ ಒಗ್ಗಟ್ಟಿನ ಭಾವನೆ ಮೂಡಲಿ ಎಂದು ಅವರು ಆಶಿಸಿದರು.ಇದು ಮುಂದಿನ ದಿನಗಳಲ್ಲಿ
ಇನ್ನಷ್ಟು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಪ್ರೇರಣೆಯಾಗಲಿದೆ ಎಂದು ಶುಭ ಹಾರೈಸಿದರು.
ಈ ಸಂದರ್ಭ ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡ ನಾಯರ್ಹಿತ್ಲು, ಸಂಚಾಲಕ ಸತ್ಯಶಾಂತಿ ತ್ಯಾಗಮೂರ್ತಿ, ಕಾರ್ಯದರ್ಶಿ ನಿರಂಜನ ಮಿತ್ತಮಜಲು, ಪ್ರಮುಖರಾದ ಸುಪ್ರೀತ್ ಮೋಂಟಡ್ಕ, ಲೀಲಾವತಿ ಕರುಣಾಕರ ನಡುಮನೆ, ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರಿನವರು ಹಾಜರಿದ್ದರು.












