(ಚಿತ್ರ: ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿರುವುದು)
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
2019ರ ಪುಲ್ವಾಮ ದಾಳಿಯ ನಂತರ
ಕಣಿವೆ ರಾಜ್ಯದಲ್ಲಿ ನಡೆದ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
ಮೃತಪಟ್ಟ 26 ಮಂದಿಯಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಪ್ರವಾಸಿಗರ ಮೇಲೆ ಮಂಗಳವಾರ ಮಧ್ಯಾಹ್ನ ಶಸ್ತ್ರಸಜ್ಜಿತ ಉಗ್ರರು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉಳಿದ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಗೃಹ ಸಚಿವ ಅಮಿತ್ ಷಾ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ.