ಕಲ್ಲುಗುಂಡಿ: ಸಂಪಾಜೆ ಗ್ರಾಮದ ಕಲ್ಲುಗುಂಡಿ ಜುಮಾ ಮಸೀದಿ ಬಳಿ ಹಾಗೂ ರಾಷ್ಟೀಯ ಹೆದ್ದಾರಿ ಬಳಿ ತಡೆಗೋಡೆ ನಿರ್ಮಿಸಲು ವಿಶೇಷ ಅನುದಾನ ದೊರಕಿಸಿ ಕೊಡುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಲ್ಲಿ
ಮನವಿ ಸಲ್ಲಿಸಲಾಯಿತು.ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ. ಎಂ ಶಹೀದ್ ತೆಕ್ಕಿಲ್,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಕೆ.ಹಮೀದ್ ಗೂನಡ್ಕ ಪಂಚಾಯತ್ ಉಪಾಧ್ಯಕ್ಷ ಎಸ್. ಕೆ. ಹನೀಫ್. ಕಲ್ಲುಗುಂಡಿ ಮಸೀದಿ ಆದ್ಯಕ್ಷರಾದ ಅಲಿ ಹಾಜಿ ಸಚಿವರಲ್ಲಿ ಮನವಿ ಮಾಡಿದರು. ಸಚಿವರು ಸ್ಥಳದಲ್ಲೇ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.