ಕಲ್ಲುಗುಂಡಿ: ಕಲ್ಲಯುಗುಂಡಿ ಸುನ್ನಿ ಸೆಂಟರ್ನಲ್ಲಿ ಎಸ್.ಎಸ್.ಎಫ್., ಎಸ್.ವೈ.ಎಸ್. ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯೂನಿಟ್ ಜಂಟಿ ಆಶ್ರಯದಲ್ಲಿ ಮೌಲಿದ್ ಮಜ್ಲಿಸ್, ಮಹ್ಳರತುಲ್ ಬದ್ರಿಯ್ಯ ಹಾಗೂ ತಾಜುಲ್ ಉಲಮಾ ಅನುಸ್ಮರಣಾ ಕಾರ್ಯಕ್ರಮ ನಡೆಯಿತು. ಮುಖ್ಯ ಪ್ರಭಾಷಣಕಾರರಾಗಿ
ಜಲೀಲ್ ಸಖಾಫಿ ಕೊಂಡಂಗೇರಿ ಮಾತನಾಡಿ, ಪ್ರವಾದಿ ಪ್ರೇಮ ಮತ್ತು ಧಾರ್ಮಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಸಾಧ್ಯ ಎಂದು ಹೇಳಿದರು. ಫೈಝಲ್ ಝುಹ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ನಡೆದ ವಿಶೇಷ ಮೌಲಿದ್ ಮಜ್ಲಿಸ್ ಮತ್ತು ಮಹ್ಳರತುಲ್ ಬದ್ರಿಯ್ಯ ಮಜ್ಲಿಸ್ನಲ್ಲಿ ಸಾರ್ವಜನಿಕರು, ಧಾರ್ಮಿಕ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.











