ತಲಕಾವೇರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ
ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಎ.ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ. ತೀರ್ಥೋದ್ಭವಕ್ಕೆ ಭರದ ಸಿದ್ಧತೆಗಳು ನಡೆಯುತಿದೆ.