ಭಾಗಮಂಡಲ: ತಲಕಾವೇರಿಯಲ್ಲಿ ನಡೆಯುವ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ.ಅ.17 ರಂದು ಬೆಳಗ್ಗೆ 7:40 ಕ್ಕೆ ಕೊಡಗಿನ ತಲಕಾವೇರಿಯಲ್ಲಿ ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಹರಿಯಲಿದೆ.ತಲಕಾವೇರಿಯ ತೀರ್ಥೋದ್ಭವಕ್ಕೆ ಈಗಾಗಲೇ ಸಿದ್ಧತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ತಲಕಾವೇರಿಯಲ್ಲಿ ಜರುಗುವ
ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ.
ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ,
ಜಿಲ್ಲಾಧಿಕಾರಿ ವೆಂಕಟ್ ರಾಜಾ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತರರು ಭಾಗವಹಿಸಿದ್ದರು.