ತಲಕಾವೇರಿ: ತಲಕಾವೇರಿಯಲ್ಲಿ ಇಂದು ಪವಿತ್ರ ತೀರ್ಥೋದ್ಭವ ನಡೆಯಲಿದೆ. ರಾತ್ರಿ 7.21ಕ್ಕೆ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದ್ದು ಕಾವೇರಿ ನದಿ ತೀರ್ಥರೂಪಿಣಿಯಾಗಿ ಹರಿಹಲಿದೆ. ಅ.17ರ ರಾತ್ರಿ 7.21 ಗಂಟೆಗೆ ಸಲ್ಲುವ
ಮೇಷ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ವತಿಯಿಂದ ತಯಾರಿ ಮಾಡಿಕೊಳ್ಳಲಾಗಿದೆ.
ಭಾಗಮಂಡಲದಿಂದ ತಲಕಾವೇರಿವರೆಗಿನ 8 ಕಿ.ಮೀ ರಸ್ತೆ ಉದ್ದಕ್ಕೂ ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್‍ಗಳ ಸ್ಥಾಪನೆ ಮಾಡಲಾಗಿದೆ. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ, ಮತ್ತಿತರ ಸಿದ್ಧತೆಯನ್ನು ಮಾಡಲಾಗಿದೆ. ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಸ್ ಕಲ್ಪಿಸಲಾಗಿದೆ.
ತೀರ್ಥೋದ್ಭವ ದಿನವಾದ ಸೋಮವಾರ ಸಂಜೆ 5 ಗಂಟೆಯಿಂದ ಪೂಜಾ ಕಾರ್ಯಗಳು ಆರಂಭವಾಗಲಿದೆ. ತಲಕಾವೇರಿಯಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ.