ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಮತ್ತು ಸರಕಾರಿ ಪ್ರೌಢಶಾಲೆ ಎಲಿಮಲೆ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಕ್ರೀಡಾ ವೈಭವ – 2024 ಎಲಿಮಲೆ ಸರಕಾರಿ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಮುಖ್ಯ ಕಾರ್ಯರ್ನಿಹಣಾಧಿಕಾರಿ ರಾಜಣ್ಣ ಕೆ.ದೀಪ ಬೆಳಗಿಸಿ
ಉದ್ಘಾಟಿಸಿದರು.ಕ್ರೀಡಾ ವೈಭವ – 2024 ಇದರ ಸಂಘಟನಾ ಸಮಿತಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ದೇವಚಳ್ಳ ಶಾಲಾ ಮುಖ್ಯ ಶಿಕ್ಷಕ ಶ್ರೀಧರ ಗೌಡ, ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು, ಎಸ್.ಡಿ.ಎಂ.ಸಿ. ಅಧ್ಯಕ್ಷ ಧನಂಜಯ ಬಾಳೆತೋಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ದೈಹಿಕ ಶಿಕ್ಷಣಾ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಶಾಲಾ ದೈಹಿಕ ಶಿಕ್ಷಕಿ ತಿರುಮಲೇಶ್ವರಿ ಯಂ.ಯಸ್., ದೇವಚಳ್ಳ ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಸಂಧ್ಯಾ ಸ್ವಾಗತಿಸಿದರು. ಶಿಕ್ಷಕ ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಎಲಿಮಲೆಯ ಸರಕಾರಿ ಪ್ರೌಢಶಾಲೆಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ ಕ್ರೀಡಾ ವೈಭವಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಸಂಘಟನಾ ಸಮಿತಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪ್ರಮುಖರಾದ ಡಿ.ಟಿ.ದಯಾನಂದ, ರಾಜೇಶ್ ಅಂಬೆಕಲ್ಲು ಮತ್ತಿತರು ಉಪಸ್ಥಿತರಿದ್ದರು.