ಮರ್ಕಂಜ:ಕಬಡ್ಡಿ ನಮ್ಮ ಗ್ರಾಮೀಣ ಜನರ ಇಷ್ಟ ಆಟ. ನಮ್ಮ ದೇಶದ ಜನಪ್ರಿಯ ಕ್ರೀಡೆ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸಲು ಸಾಧ್ಯ. ಆದುದರಿಂದ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಸುಳ್ಯ ತಾಲೂಕು
ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಮರ್ಕಂಜ ಇದರ ಆಶ್ರಯದಲ್ಲಿ ಮರ್ಕಂಜ ಪ್ರೌಢ ಶಾಲೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಹೊಸೊಳಿಕೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸಮಿತಿಯ ಸಂಚಾಲಕ ಹರೀಶ್ ಕಂಜಿಪಿಲಿ, ಮರ್ಕಂಜದ ಶ್ರೀ ಅನ್ನ ಪೂರ್ಣೇಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧಮಠದ ಧರ್ಮದರ್ಶಿ ರಾಜೇಶ್ ನಾಥ್, ಸುಳ್ಯ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಶಾಲಾ ಮುಖ್ಯ ಶಿಕ್ಷಕಿ ವೀಣಾ ಎಂ.ಟಿ, ಗ್ರಾಮ ಪಂಚಾಯತ್ ಸದಸ್ಯ ಗೋವಿಂದ ಅಳವುಪಾರೆ, ಎಸ್ಡಿಎಂಸಿ ಅಧ್ಯಕ್ಷ ಸುರೇಶ್ ಕಟ್ಟದಮೂಲೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಇಡ್ಯಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಿಕಾಂತ್ ಗುಳಿಗಮೂಲೆ, ವಿದ್ಯಾರ್ಥಿ ನಾಯಕ ಮೋಕ್ಷಿತ್ ಪಿ.ವಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.