ಸುಳ್ಯ:ಶಾಲಾ ಶಿಕ್ಷಣ ಇಲಾಖೆ ವತಿಯಿಂದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟ ದುಗ್ಗಲಡ್ಕ ಪ್ರೌಢ ಶಾಲಾ ಮೈದಾನದಲ್ಲಿ ಜರಗಿತು. ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ.ಶಹೀದ್ ತೆಕ್ಕಿಲ್ ಕ್ರೀಡಾಕೂಟ ಉದ್ಘಾಟಿಸಿದರು.ಕರ್ನಾಟಕ
ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.ತಾಲೂಕು ಕ್ರೀಡಾಕೂಟ ಸಮಿತಿಯ ಅಧ್ಯಕ್ಷೆ ಶೀಲಾವತಿ ಮಾಧವ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲ ನೀರಬಿದಿರೆ, ತುಳು ಕುರಲ್ ಅಧ್ಯಕ್ಷ ಕೆ. ಟಿ. ವಿಶ್ವನಾಥ್ ಉಪಸ್ಥಿತರಿದ್ದರು. ಶಾಲಾ ಮುಖ್ಯ್ಯೊಪಾಧ್ಯಾಯ ಸುರೇಶ್ ಸ್ವಾಗತಿಸಿದರು, ಸುಜಯ ವಿಷಯ ಪ್ರಸ್ತಾವನೆಗೈದರು.ಧನಂಜಯ ಮೆರ್ಕಜೆ ಮತ್ತು ಹರಿಪ್ರಸಾದ ಕೊಯಿoಗಾಜೆ ಕಾರ್ಯಕ್ರಮ ನಿರೂಪಿಸಿದರು.









