ಸುಳ್ಯ:ಮೈ ಭಾರತ್ ದ.ಕ. ಜಿಲ್ಲೆ ಮಂಗಳೂರು, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟ ನಾಳೆ (ನ. 16ರಂದು) ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮುಂಭಾಗದ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ
ನಡೆಯಲಿದೆ.ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯದ ಕ್ರೈಂ ಎಸ್ಐ ಸರಸ್ವತಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸುಳ್ಯ ತಹಶಿಲ್ದಾರ್ ಮಂಜುಳಾ, ಜಿಲ್ಲಾ ಯುವ ಸಮನ್ವಯ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಎಂದು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ತಿಳಿಸಿದ್ದಾರೆ.
ಯುವತಿಯರಿಗೆ ಖೋಖೋ, ಶಾಟ್ ಪುಟ್, 100 ಮೀ. ಓಟ, ಪುರುಷರಿಗೆ ವಾಲಿಬಾಲ್, ಶಾಟ್ ಪುಟ್ ಮತ್ತು 100 ಮೀ. ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ಸ್ಲೋ ಸ್ಕೂಟಿ ರೇಸ್, ಶಾಟ್ ಫುಟ್ ಸ್ಪರ್ಧೆಗಳು ನಡೆಯಲಿದೆ.ಯುವತಿಯರ ಸ್ಪರ್ಧೆಯಲ್ಲಿ ಸ್ಪರ್ಧಿಸಲು 15 ವರ್ಷದಿಂದ 29 ವರ್ಷದೊಳಗಿನವರಿಗೆ ಮಾತ್ರ ಅವಕಾಶ. ಸ್ಪರ್ಧಿಗಳು ಸಂಘ ಸಂಸ್ಥೆಗಳ ಮುಖಾಂತರ ಸ್ಪರ್ಧಿಸಬೇಕು. ಪ್ರಥಮ ಬಹುಮಾನ ಪಡೆದವರು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗುತ್ತಾರೆ. ಬೆಳಿಗ್ಗೆ 9.00 ಗಂಟೆಗೆ ಮುಂಚಿತವಾಗಿ ತಮ್ಮ ಇರುವಿಕೆಯನ್ನು ಗುರುತಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ.





