ಸುಳ್ಯ:ಸುಳ್ಯ ತಾಲೂಕು ಕಚೇರಿಯಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹ ದ್ದೂರ್ ಶಾಸ್ತ್ರಿ ಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.ಅಧ್ಯಕ್ಷತೆಯನ್ನು
ಸುಳ್ಯ ತಹಶೀಲ್ದಾರ್ ಎಂ.ಮಂಜುಳಾ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿ ಗೀತಾ, ಎಪಿಎಂಸಿ ಅಧಿಕಾರಿ ಮುದ್ದು ಕೃಷ್ಣ, ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ತಾಲೂಕು ಕಚೇರಿ ಮತ್ತು ಸರ್ವೇ ಇಲಾಖೆ ಸಿಬ್ಬಂದಿ ಗಳು ಉಪಸ್ಥಿತರಿದ್ದರು
ಸುಳ್ಯ ಗ್ರಾಮ ಆಡಳಿತಾಧಿಕಾರಿ ತಿಪ್ಪೇಶ್ ಸ್ವಾಗತಿಸಿ ವಂದಿಸಿದರು.












