ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಮತ್ತು ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು ಸುಳ್ಯ ಹಾಗೂ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿ.ಪ್ರಾ. ಶಾಲೆ ಸುಳ್ಯ ಸಹಯೋಗದಲ್ಲಿ ನಡೆಯುವ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ‘ಕ್ರೀಡಾ ವಿಕ್ರಮ – 2023’ ಕ್ಕೆ ಸುಳ್ಯದ ಕೋಡಿಯಾಲಬೈಲು
ಮಹಾತ್ಮಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಅದ್ದೂರಿ ಚಾಲನೆ ನೀಡಲಾಗಿದೆ.ಸುಳ್ಯ ಸೈಂಟ್ ಜೋಸೆಫ್ ಮತ್ತು ಸೈಂಟ್ ಬ್ರಿಜಿಡ್ಸ್ ವಿದ್ಯಾಸಂಸ್ಥೆಗಳ ಸಂಚಾಲಕ ಫಾ.ವಿಕ್ಟರ್ ಡಿ’ಸೋಜ ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ
ಉಬರಡ್ಕ ಮಿತ್ತೂರು ಗ್ರಾ.ಪಂ ಅಧ್ಯಕ್ಷೆ ಪೂರ್ಣಿಮಾ ಸೂಂತೋಡು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಕ್ರೀಡಾಪಟು ಆದರ್ಶ್ ಎಸ್.ಪಿ.ನೇತೃತ್ವದಲ್ಲಿ ತರಲಾದ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದ ಅತಿಥಿಗಳು ಹಾಗೂ ಗಣ್ಯರು ಕ್ರೀಡಾ ಜ್ಯೋತಿಯಿಂದ ದೀಪ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಎಂ.ಮಂಜುನಾಥ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶೀತಲ್ ಯು.ಕೆ.,ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತಾ, ಶಶಿಕಲಾ ನೀರಬಿದಿರೆ, ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ರೈ ಉಬರಡ್ಕ, ಮಮತಾ ಕುದ್ಪಾಜೆ, ಮಹಾತ್ಮಾಗಾಂಧಿ ಮಲ್ನಾಡ್ ಪ್ರೌಢಶಾಲೆಯ ಸಂಚಾಲಕ ದೊಡ್ಡಣ್ಣ ಬರೆಮೇಲು, ಸೈಂಟ್ ಬ್ರಿಜಿಡ್ಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಚ, ನವೀನ್ ಮಚಾದೊ, ಸೈಂಟ್ ಜೋಸೆಫ್ ಪ್ರಾಥಮಿಕ ಶಾಲೆಯ ಪೋಷಕರ ಸಮಿತಿ ಅಧ್ಯಕ್ಷ ಜೆ.ಕೆ.ರೈ, ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಪೋಷಕರ ಸಮಿತಿಯ ಅಧ್ಯಕ್ಷ ಗುರುಸ್ವಾಮಿ ಬಿ.ಜಿ, ಸೈಂಟ್ ಜೋಸೆಫ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮಾ, ಸೈಂಟ್ ಜೋಸೆಫ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ, ಸೈಂಟ್ ಬ್ರಿಜಿಡ್ಸ್ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್,ಸೈಂಟ್ ಜೋಸೆಫ್ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ,

ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಪದವಿಧರೇತರ ಮುಖ್ಯೋಪಾಧ್ಯಾಯ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಬನ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಯೋಗೀಶ್ ಪಂಜ, ತಾಲೂಕು ಅಧ್ಯಕ್ಷ ಧನಂಜಯ ಮೇರ್ಕಜೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಶಿಕ್ಷಣ ಸಂಯೋಜಕರಾದ ಸಂಧ್ಯಾ ಕುಮಾರಿ, ನಳಿನಿ, ಬಿ.ಆರ್.ಸಿ.ಗಳಾದ ಮಮತಾ, ಸವಿತಾ ಸೋಣಂಗೇರಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ರೆಂಜಾಳ, ರಾಷ್ಟ್ರೀಯ ಕ್ರೀಡಾಪಟು ಆದರ್ಶ್ ಎಸ್.ಪಿ., ಅವರನ್ನು ಸನ್ಮಾನಿಸಲಾಯಿತು.
ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಸ್ವಾಗತಿಸಿ,ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೈಂಟ್ ಬ್ರಿಜಿಡ್ಸ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಡರ್ ಅಂತೋನಿ ಮೇರಿ ವಂದಿಸಿದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಡೆಯಿತು.
Lಬಳಿಕ ಕ್ರೀಡಾ ಕೂಟ ಆರಂಭಗೊಂಡಿತು. ಎತಡು ದಿನಗಳ ಕ್ರೀಡಾಕೂಟದಲ್ಲಿ ತಾಲೂಕಿನ 5 ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ 76 ಶಾಲೆಗಳಲ್ಲಿನ 700 ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.









