ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಮತ್ತು ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು ಸುಳ್ಯ ಹಾಗೂ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿ.ಪ್ರಾ. ಶಾಲೆ ಸುಳ್ಯ ಸಹಯೋಗದಲ್ಲಿ ಸುಳ್ಯದ ಕೋಡಿಯಾಲಬೈಲು ಮಹಾತ್ಮಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ
ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ‘ಕ್ರೀಡಾ ವಿಕ್ರಮ – 2023’ ಸಮಾಪನಗೊಂಡಿತು.ಸಮಾರೋಪ ಸಮಾರಂಭದಲ್ಲಿ
ಗಣ್ಯರು ವಿಜೇತರಿಗೆ ಬಹುಮಾನ ವಿತರಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ವಲಯ ಶ್ರೇಷ್ಠ ಧರ್ಮಗುರು ಫಾ.ಲೋರೆನ್ಸ್ ಮಸ್ಕರೇನಸ್ ವಹಿಸಿದ್ದರು. ಸುಳ್ಯ ಸೈಂಟ್ ಜೋಸೆಫ್ ಮತ್ತು ಸೈಂಟ್ ಬ್ರಿಜಿಡ್ಸ್ ವಿದ್ಯಾಸಂಸ್ಥೆಗಳ ಸಂಚಾಲಕ ಫಾ.ವಿಕ್ಟರ್ ಡಿ’ಸೋಜ,
ಉಬರಡ್ಕ ಮಿತ್ತೂರು ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾಕುಮಾರಿ ಪಾಲಡ್ಕ, ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಡೇವಿಡ್ ಧೀರಾ ಕ್ರಾಸ್ತಾ, ಗ್ರಾ.ಪಂ.ಸದಸ್ಯ ಸಂದೀಪ್ ಕುತ್ತಮೊಟ್ಟೆ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ಗೌಡ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡ ಸೋಶಿಯೋ ಎಜ್ಯುಕೇಷನ್ ಫೌಂಡೇಷನ್ನ ಅಧ್ಯಕ್ಷ ಚಂದ್ರ ಕೋಲ್ಚಾರ್, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ, ಮಹಾತ್ಮಾಗಾಂಧಿ ಮಲ್ನಾಡ್ ಪ್ರೌಢಶಾಲೆಯ ಸಂಚಾಲಕ ದೊಡ್ಡಣ್ಣ ಬರೆಮೇಲು, ಸೈಂಟ್ ಬ್ರಿಜಿಡ್ಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಚ, ನವೀನ್ ಮಚಾದೊ, ಕಾರ್ಯದರ್ಶಿ ಜೂಲಿಯಾನ ಕ್ರಾಸ್ತಾ, ಸೈಂಟ್ ಜೋಸೆಫ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮಾ, ಸೈಂಟ್ ಬ್ರಿಜಿಡ್ಸ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಡರ್ ಅಂತೋನಿ ಮೇರಿ
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಯೋಗೀಶ್ ಚಿದ್ಗಲ್, ಶಿಕ್ಷಣ ಸಂಯೋಜಕರಾದ ಸಂಧ್ಯಾ ಕುಮಾರಿ, ಪ್ರಮುಖರಾದ ಕೆ.ಟಿ.ವಿಶ್ವನಾಥ್, ಶ್ರೀನಾಥ್ ಬಾಳಿಲ, ಹರೀಶ್ ಬಂಟ್ವಾಳ್ ಮತ್ತಿತರರು ಉಪಸ್ಥಿತರಿದ್ದರು.
ಸೈಂಟ್ ಜೋಸೆಫ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ, ಸೈಂಟ್ ಬ್ರಿಜಿಡ್ಸ್ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್,
ಸೈಂಟ್ ಜೋಸೆಫ್ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಸ್ವಾಗತಿಸಿ, ಸೈಂಟ್ ಜೋಸೆಫ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ, ವಂದಿಸಿದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.