ಸುಳ್ಯ: ಕಾಂಗ್ರೆಸ್ ಮುಖಂಡ ಹಾಗೂ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಅವರ ಅರಂಬೂರಿನ ಮನೆಗೆ ನುಗ್ಗಿದ ಕಳ್ಳರು ನಗದು ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.ಸಂಶುದ್ದೀನ್ ಮತ್ತು ಮನೆಯವರು ಕುಟುಂಬ ನಿನ್ನೆ ಮಂಗಳೂರಿಗೆ ಹೋಗಿದ್ದರು. ರಾತ್ರಿ ಮನೆಗೆ ಹಿಂತಿರುಗಿ ಬಂದಾಗ ಕಳವು ಪ್ರಕರಣ ನಡೆದದ್ದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಸುಳ್ಯ ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಬೆರಳಚ್ಚು ತಜ್ಞರು,ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
previous post