ಸುಳ್ಯ:ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ಜು.23ರಂದು ಬೆಳಿಗ್ಗೆ 10 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರಕೋವಿಲ್ಕಾ ಕಾರ್ಯಕ್ರಮವನ್ನು
ಉದ್ಘಾಟಿಸಿ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ತೆಕ್ಕಿಲ್ ಮಹಮ್ಮದ್ ಹಾಜಿ ಅವರ 50ನೇ ಪುಣ್ಯ ಸ್ಮರಣೆ ಪ್ರಯುಕ್ತ ಪ್ರತಿಷ್ಠಾನದ ವತಿಯಿಂದ ಒಂದು ವರ್ಷದಲ್ಲಿ ಹಮ್ಮಿಕೊಳ್ಳುವ 50 ಕಾರ್ಯಕ್ರಮಗಳಿಗೆ ಅವರು ಚಾಲನೆ ನೀಡಲಿದ್ದಾರೆ. ತೆಕ್ಕಿಲ್ ಪ್ರತಿಷ್ಠಾನದ ನವೀಕರಣಗೊಂಡ ಕಚೇರಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರಳ್ಯ ಉದ್ಘಾಟಿಸಲಿದ್ದಾರೆ. ತಾಲೂಕಿನ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಸಾಧಕ ವಿಧ್ಯಾರ್ಥಿಗಳನ್ನು ಕರ್ನಾಟಕ ಲೋಕಸಭಾ ಆಯೋಗದ ಮಾಜಿ ಅಧ್ಯಕ್ಷ ಶ್ಯಾಮ್ ಭಟ್ ಗೌರವಿಸಲಿದ್ದಾರೆ. ತೆಕ್ಕಿಲ್ ಮಹಮ್ಮದ್ ಹಾಜಿಯವರ ಅನುಸ್ಮರಣೆಯನ್ನು

ತೆಕ್ಕಿಲ್ ಮೊಹಮ್ಮದ್ ಹಾಜಿ
ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಿವೃತ್ತ ಪ್ರಾಶುಪಾಲ ಕೆ.ಆರ್ ಗಂಗಾಧರ್ ಕುರುಂಜಿ ಹಾಗು ಯು.ಟಿ.ಖಾದರ್ ಅವರ ಅಭಿನಂದನಾ ಭಾಷಣವನ್ನು ಲಯನ್ಸ್ ಮಾಜಿ ಗವರ್ನರ್ ಎಂ.ಬಿ ಸದಾಶಿವ ಮಾಡಲಿದ್ದಾರೆ.ಅಲ್ಲದೆ ಸಮಾರಂಭದಲ್ಲಿ ಅತಿಥಿಗಳಾಗಿ ಸಂಪಾಜೆಯ ಸಂತ ಪ್ರಾನ್ಸಿಸ್ ಚರ್ಚ್ನ ಧರ್ಮಗುರುಗಳಾದ ಫಾ.ಫೌಲ್ ಕ್ರಾಸ್ತಾ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಇನಾಯತ್ ಅಲಿ ಮೂಲ್ಕಿ,ನಿವೃತ್ತ ಡಿಸಿಪಿ ಜಿ.ಎ ಬಾವಾ, ಉಧ್ಯಮಿ ಕೃಷ್ಣಪ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಧನಂಜಯ ಅಡ್ಪಂಗಾಯ, ಭರತ್ ಮುಂಡೋಡಿ, ಬಂಟರ ಸಂಘದ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಬಿ.ಜೆ.ಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜೆ.ಡಿ.ಎಸ್ ಅಧ್ಯಕ್ಷ ಸುಕುಮಾರ ಕೋಡ್ತುಗುಳಿ, ಅರಂತೋಡು ಗ್ರಾಂ.ಪಂ ಅಧ್ಯಕ್ಷೆ ಹರಿಣಿ ದೇರಾಜೆ, ಸಂಪಾಜೆ ಗ್ರಾಂ.ಪಂ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ,

ಅಹಮ್ಮದ್ ದೇವರಕೋವಿಲ್
ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಇಸಾಕ್ ಸಾಹೇಬ್ ಪಾಜಪಳ್ಳ, ಕೆ.ಎಂ ಮುಸ್ತಪ, ನಿವ್ರತ್ತ ಮುಖ್ಯೋಪಾಧ್ಯಾಯ ದಾಮೋದರ ಮಾಸ್ತರ್, ಸದಾನಂದ ಮಾವಜಿ, ತೆಕ್ಕಿಲ್ ಶಿಕ್ಷಣ ಸಂಸ್ಥೆಯ ಸಮಿತಿ ಅಧ್ಯಕ್ಷ ಉನೈಸ್ ಪೆರಾಜೆ, ಮುಖ್ಯೋಪಾಧ್ಯಾಯ ಸಂಪತ್, ತೆಕ್ಕಿಲ್ ಕುಟುಂಬಸ್ಥರ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಚೊಕ್ಕಾಡಿ ಹಾಗೂ ಇತರರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ ಪೇರಡ್ಕ ಮಸೀದಿ ವಠಾರದಲ್ಲಿ ತೆಕ್ಕಿಲ್ ಮೊಹಮ್ಮದ್ ಹಾಜಿ ಮತ್ತು ಕುಟುಂಬಸ್ಥರ ಖಬರ್ ಝಿಯಾರತ್ ಮತ್ತು ಮೌಲೂತ್ ಪಾರಾಯಣ ನಡೆಯಲಿದ್ದು ಇದರ ನೇತೃತ್ವವನ್ನು ಪೇರಡ್ಕ ಮಸೀದಿಯ ಖತೀಬರಾದ ರಿಯಾಝ್ ಪೈಝಿಯವರು ವಹಿಸಲಿದ್ದಾರೆ.
ತೆಕ್ಕಿಲ್ ಮೊಹಮ್ಮದ್ ಹಾಜಿ ಅವರ 50 ನೇ ಪುಣ್ಯ ಸ್ಮರಣೆ:
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ, ಅರಂತೋಡು ಸಹಿತ ಕರ್ನಾಟಕ ಕೇರಳ ಮತ್ತು ಇತರ ವಿವಿಧ ಭಾಗಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರೀಯಶೀಲರಾಗಿ, ಅವಿಭಕ್ತ ಕೇರಳ ಮತ್ತು ಕರ್ನಾಟಕ ರಾಜ್ಯದಲ್ಲಿ ಉದ್ಯಮಿಯಾಗಿ ಸಮಾಜ ಸೇವಕರಾಗಿ ಅನೇಕ ಮಸೀದಿ ಮತ್ತು ಮದರಸಗಳ ಶಾಲೆಗಳ ವಿವಿಧ ಸಂಘ ಸಂಸ್ಥೆಗಳ ಸ್ಥಾಪಕರಾಗಿ, ಸರಕು ಸಾರಿಗೆ, ಮರದ ವ್ಯಾಪಾರಿಯಾಗಿ, ಕಾಡುತ್ಪತಿ ಮತ್ತು ಮರ ಗುತ್ತಿಗೆದಾರರಾಗಿ, ಮಾದರಿ ಕೃಷಿಕರಾಗಿ, ಜಮೀನುದಾರರಾಗಿ ಊರಿನ ಅಭಿವೃದ್ಧಿಯ ಹರಿಕಾರರಾಗಿದ್ದ ತೆಕ್ಕಿಲ್ ಕುಟುಂಬದ ಹಿರಿಯರು ಜಾತ್ಯತೀತ ಪರಮತ ಸಹಿಷ್ಣು ಆದರ್ಶ ವ್ಯಕ್ತಿತ್ವದ ದಿ.ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ.