ಅರಂತೋಡು: ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ
ಪ್ರತಿಷ್ಠಾನದ ವತಿಯಿಂದ ಟಿ.ಎಂ ಶಹೀದ್ ತೆಕ್ಕಿಲ್ ಅವರ 50ನೇ ಹುಟ್ಟು ಹಬ್ಬದ ವರ್ಷಾಚರಣೆಯ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಬಡ ಮಹಿಳೆಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ “ಬೈತುಲ್ ಆಯಿಷಾ”ಮನೆಯ ಉದ್ಘಾಟನೆ ಮತ್ತು ಕೀ
ಹಸ್ತಾಂತರ ಕಾರ್ಯಕ್ರಮ ಹಾಗು ನಿವೃತ್ತ ಮುಖ್ಯೋಪಾಧ್ಯಾಯ ದಾಮೋದರ ಮಾಸ್ತರ್ ಅವರಿಗೆ “ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ಸಮಾರಂಭ ಫೆ.17ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಮನೆ ಹಸ್ತಾಂತರ ಮಾಡಿ ಎಕ್ಸಲೆನ್ಸ್ ಅವಾರ್ಡ್ ಪ್ರದಾನ ಮಾಡಿ ಮಾತನಾಡಿದರು. ‘ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ದಾನ ಧರ್ಮ ಹಾಗು ಗುರುಗಳ ಮೇಲಿನ ಭಕ್ತಿ ಅತೀ ಅಗತ್ಯ. ಈ ಎರಡೂ ಕಾರ್ಯವನ್ನು ಅತ್ಯಂತ ನಿಷ್ಠೆಯಿಂದ ಟಿ.ಎಂ.ಶಹೀದ್ ಮಾಡಿಕೊಂಡು ಬರುತ್ತಿದ್ದಾರೆ ಎಂದು ಇನಾಯತ್ ಅಲಿ ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಢಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಮಾತನಾಡಿ’ಕಳೆದ 3 ದಶಕಗಳಿಂದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರೀಯಾಶೀಲರಾಗಿ ಹತ್ತು ಹಲವು ಜನಪರ ಹಾಗು ಸಮಾಜಮುಖಿ ಕಾರ್ಯಕ್ರಮಗಳನ್ನು ಪ್ರತಿಷ್ಠಾನ ಹಮ್ಮಿಕೊಂಡು ಬರುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಹಾಜಿ ಇಸಾಕ್ ಬಾಖವಿ ದುವಾಃ ನೆರವೇರಿಸಿದರು.
ಪೇರಡ್ಕ ಜುಮಾ ಮಸೀದಿಯ ಖತೀಬರಾದ ರಿಯಾಝ್ ಪೈಝಿ, ಗೂನಡ್ಕ ಬಿ.ಜೆ.ಎಂ ಖತೀಬರಾದ ಮಹಮ್ಮದ್ ಅಲಿ ಸಖಾಫಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್.ಗಂಗಾಧರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್, ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನಗರ ಪಂಚಾಯತ್ ಸದಸ್ಯರಾದ ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ಸುಳ್ಯ ಗಾಂಧಿನಗರ

ಎಂ.ಜೆ.ಎಂ ಅಧ್ಯಕ್ಷ ಕೆ.ಎಂ.ಮುಸ್ತಫ, ಮುಸ್ಲಿಂ ಸೆಂಟ್ರಲ್ ಕಮಿಟಿ ಪ್ರಧಾನ ಕಾರ್ಯದರ್ಶಿ ಎಸ್.ಸಂಶುದ್ಧೀನ್, ಕೆಪೆಕ್ ಮಾಜಿ ನಿರ್ದೇಶಕರಾದ ಪಿ.ಎ.ಮಹಮ್ಮದ್, ಗೂನಡ್ಕ ಎಂಜೆಎಂ ಅಧ್ಯಕ್ಷ ಅಬ್ದುಲ್ಲ ಕೊಪ್ಪತ್ತಕಜೆ, ಸಂಪಾಜೆ ಬಿ.ಜೆ.ಎಂ ಅಧ್ಯಕ್ಷ ತಾಜ್ ಮಹಮ್ಮದ್ ಸಂಪಾಜೆ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರಹೀಂ ಬೀಜದಕಟ್ಟೆ, ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಪಿ.ಜಗದೀಶ್, ಇಬ್ರಾಹಿಂ ಕತ್ತರ್ ಮಂಡೆಕೋಲು, ಗುತ್ತಿಗಾರು ಗ್ರಾ.ಪಂ.ಮಾಜಿ ಅಧ್ಯಕ್ಷ ಪರಶುರಾಮ ಚಿಲ್ತಡ್ಕ, ವಕೀಲರಾದ ಅಬೂಬಕ್ಕರ್ ಅಡ್ಕಾರ್, ಮೂಸಾ ಕುಂಞಿ ಪೈಂಬೆಚ್ಚಾಲ್,ಸಂಪಾಜೆ ಗ್ರಾ.ಪಂ.ಸದಸ್ಯ ಎಸ್.ಕೆ.ಹನೀಫ್ ಮುಖಂಡರಾದ

ಪಿ.ಎ.ಉಮ್ಮರ್ ಗೂನಡ್ಕ, ಹಮೀದ್ ಹಾಜಿ, ಬದ್ರುದ್ದೀನ್ ಪಠೇಲ್, ಎ.ಕೆ.ಹಸೈನಾರ್ ಕಲ್ಲುಗುಂಡಿ, ಸಿದ್ದಿಕ್ ಕೊಕ್ಕೊ,ಹನೀಫ್ ಸಂಟ್ಯಾರ್, ಅಬ್ದುಲ್ ಮಜೀದ್ ಎಸ್.ಎಂ,ತೆಕ್ಕಿಲ್ ಪ್ರತಿಷ್ಠಾನದ ಕೋಶಾಧಿಕಾರಿ ಟಿ.ಎಂ.ಜಾವೇದ್ ಮತ್ತಿತರರು ಉಪಸ್ಥಿತರಿದ್ದರು.
ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ಸ್ವಾಗತಿಸಿ, ಸಂಪಾಜೆ ಗ್ರಾ.ಪಂ.ಸದಸ್ಯ ಅಬೂಸಾಲಿ ವಂದಿಸಿದರು. ನಿವೃತ್ತ ಶಿಕ್ಷಕ ಅಬ್ದುಲ್ಲಾ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.