ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.ಇಲ್ಲಿನ ಎಲ್.ಬಿ. ಕ್ರೀಡಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣದ ಗವರ್ನರ್
ತಮಿಳಿಸೈ ಸೌಂದರರಾಜನ್ ಪ್ರತಿಜ್ಞಾವಿಧಿ ಬೋಧಿಸಿದರು. ಭಟ್ಟಿ ವಿಕ್ರಮಾರ್ಕ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಸೇರಿ 12 ಮಂದಿಯ ಸಂಪುಟ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಸಮಾರಂಭದಲ್ಲಿ ಭಾಗಿಯಾದರು.