ಮುಂಬೈ: ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಮುನ್ನಾ ದಿನ ನ.1ರಂದು ಅನಾವರಣ ಮಾಡುತ್ತಿದೆ. ‘ಭಾರತ ರತ್ನ’ ಸಚಿನ್ ತೆಂಡೂಲ್ಕರ್ ಅವರು
ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ. ವಾಂಖೆಡೆಯ ‘ಎಂಸಿಎ’ ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ತೆಂಡೂಲ್ಕರ್ ಅವರ ಪ್ರತಿಮೆ 22 ಅಡಿ ಉದ್ದವಿದ್ದು, ಹೆಸರಾಂತ ಚಿತ್ರಕಲಾವಿದ, ಶಿಲ್ಪಿ ಪ್ರಮೋದ್ ಕಾಳೆ ಅವರು ನಿರ್ಮಿಸಿದ್ದಾರೆ. ಅವರ ಪ್ರತಿಮೆಯ ಎತ್ತರ 10 ಅಡಿ ಮತ್ತು ಅವರ ಕೈಯಲ್ಲಿ 4 ಅಡಿಯ ಬ್ಯಾಟ್ ಇದೆ. ಅದರ ಮೇಲೆ ಸಚಿನ್ ಅವರ ಪೂರ್ಣ ಹೆಸರನ್ನು ಬರೆಯಲಾಗಿದೆ. ಇಡೀ ಮೂರ್ತಿಯ ಒಟ್ಟು ಎತ್ತರ 22 ಅಡಿ ಇರಲಿದೆ. ಸಚಿನ್ ಸಿಕ್ಸರ್ ಬಾರಿಸುವ ಭಂಗಿಯಲ್ಲಿ ಪ್ರತಿಮೆ ಇದೆ.
















