ಮಡಿಕೇರಿ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಕಾರಣ ಮಡಿಕೇರಿ ನಗರದ ಹೃದಯ ಭಾಗದಲ್ಲಿದ್ದ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ. ಬಸ್ ಡಿಕ್ಕಿಯ ಪರಿಣಾಮ ವೃತ್ತಕ್ಕೂ ಹಾನಿಯಾಗಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಡಿಪೋದಿಂದ ಬಸ್ ನಿಲ್ದಾಣಕ್ಕೆ
ಹೊರಟಿದ್ದ ಬಸ್ ವಾಹನವೊಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಈ ಸಂದರ್ಭ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ. ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.