ಅರಂತೋಡು:ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕುರಿತಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಅವರು ಇಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ರಸ್ತೆಯ ಅಭಿವೃದ್ಧಿಯ ಅಗತ್ಯತೆಯನ್ನು
ಮನವರಿಕೆ ಮಾಡಿದರು. ರಸ್ತೆ ಅಭಿವೃದ್ಧಿಗೆ ಉಂಟಾಗಿರುವ ಕಾನೂನು ತೊಡಕುಗಳನ್ನು ನೀವಾರಿಸಲು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ರಸ್ತೆ ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ

ಆರಂತೋಡು-ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಮನು ಪೆರುಮುಂಡ, ಮಾಜಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹನೀಫ್, ಆರಂತೋಡು-ತೊಡಿಕಾನ ಸಹಕಾರಿ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ವಾಸುದೇವ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.