ಮಡಿಕೇರಿ: ತೊಡಿಕಾನ -ಪಟ್ಟಿ -ಭಾಗಮಂಡಲ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿಯವರು ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ ಅವರನ್ನು ಭೇಟಿಯಾಗಿ ತೊಡಿಕಾನ -ಪಟ್ಟಿ -ಭಾಗಮಂಡಲ ರಸ್ತೆ ಅಭಿವೃದ್ಧಿ
ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನೇತೃತ್ವದಲ್ಲಿ ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವು ಮಾಡಿ ಈ ರಸ್ತೆಯ ಅಭಿವೃದ್ಧಿಯ ಅಗತ್ಯತೆ ಮತ್ತು ಉಂಟಾಗಿರುವ ತಾಂತ್ರಿಕ ಸಮಸ್ಯೆ ಬಗ್ಗೆ ವಿವರಿಸಲಾಯಿತು.