ತೊಡಿಕಾನ: ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ದೊಡ್ಡದರ್ಶನಬಲಿ ನಡೆಯಿತು.ಬಟ್ಟಲು ಕಾಣಿಕೆ ನಡೆದು ನೂರಾರು ಮಂದಿ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಪಂಜ ಸೀಮಾ ಕ್ಷೇತ್ರ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ದರ್ಶನ ಬಲಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
















