ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದಾರೆ.ತುಳು ಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ
ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.1994ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.
ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.
ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು.
ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.