ಸುಳ್ಯ:ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಸುಳ್ಯ ತಾಲೂಕಿನ ಬೆಳ್ಳಾರೆಯ ಡಾ.ಶಿವರಾಮ ಕಾರಂತ ಸರ್ಕಾರಿ ಕಾಲೇಜಿನಲ್ಲಿ ತುಳು ಸಾಹಿತ್ಯ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಯಿತು.
ತುಳುನಾಡಿನ ಉಲ್ಲಾಕುಳು ಆರಾಧನೆಯ ಅನನ್ಯತೆಯ ಬಗ್ಗೆ
ನಿವೃತ್ತ ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಉಪನ್ಯಾಸ ನೀಡಿದರು.
ಕಾಲೇಜಿನ ನೂತನ ತುಳು ಕೂಟವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲ ಬಾಲಸುಬ್ರಹ್ಮಣ್ಯ ಪಿ.ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ಈಶ್ವರ್ ವಾರಣಾಸಿ,ಕಾಲೇಜಿನ ತುಳು ಕೂಟದ ವಿದ್ಯಾರ್ಥಿ ಅಧ್ಯಕ್ಷ ದುರ್ಗಾಪ್ರಸಾದ್ ಬಿ.ಎಂ. ಉಪಸ್ಥಿತರಿದ್ದರು.
ಕಾಲೇಜಿನ ತುಳು ಕೂಟದ ಸಂಯೋಜಕ ಉಪನ್ಯಾಸಕ ಮನೋಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಆಜ್ಞಾಶ್ರೀ ರೈ ಸ್ವಾಗತಿಸಿದರು, ವಿದ್ಯಾರ್ಥಿನಿ ಶ್ರಾವ್ಯ ಜಿ.ಪಿ. ಕಾರ್ಯಕ್ರಮ ನಿರೂಪಿಸಿದರು, ವಿದ್ಯಾರ್ಥಿ ಚರಣ್ ವಂದಿಸಿದರು.














